ಕೇರಳ: ಶಬರಿಮಲೆಗೆ ಯಾತ್ರೆಗೆ ತೆರಳುತ್ತಿದ್ದ ಮಂಡ್ಯದ ಬಸ್ ಪಲ್ಟಿಯಾದ ಘಟನೆ ಕೇರಳಾದ ಏರಿಮಲೈ ಬಳಿಯ ತಟ್ಟಿಪಿಟ್ಟಂ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮಾಲಾಧಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಪಘಾತ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

