ತಿರುವನಂತಪುರಂ: ಶಬರಿಮಲೆ ಚಿನ್ನ ನಷ್ಟ ಪ್ರಕರಣದಲ್ಲಿ ಭಾಗಿಯಾದ ಯಾರನ್ನೂ, ಯಾವುದೇ ಪಕ್ಷವಾದರೂ ಬಿಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕೆ.ಮುರಳೀಧರನ್ ರವಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್,”ದೇವರಿಂದ ಕದಿಯುವ ಯಾರನ್ನೂ ಬಿಡಲಾಗುವುದಿಲ್ಲ. ಅವರು ಯಾರೇ ಆಗಿರಲಿ, ಯಾವುದೇ ಪಕ್ಷಕ್ಕೆ ಸೇರಿದವರಾಗಿರಲಿ, ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ”ಎಂದು ಹೇಳಿದರು.

ವಿಶೇಷ ತನಿಖಾ ತಂಡದ (ಎಸ್‌ಐಟಿ) ವರದಿಗಾಗಿ ಕಾಯುತ್ತಿದ್ದು, ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುರಳೀಧರನ್ ಹೇಳಿದರು.

ಶಬರಿಮಲೆ ದೇವಸ್ಥಾನದ ದ್ವಾರಪಾಲಕ ವಿಗ್ರಹಗಳು ಮತ್ತು ಬಾಗಿಲ ಚೌಕಟ್ಟುಗಳಿಂದ ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ವಿಶೇಷ ತನಿಖಾ ತಂಡಕ್ಕೆ ಕೇರಳ ಹೈಕೋರ್ಟ್ ಮೇ 18 ರಂದು ಎರಡು ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ.