Ad

ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮರು ನೇಮಕ

ಲೋಕಸಭೆ ಚುನಾವಣೆ ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್‌ ಪಿತ್ರೋಡಾ ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್‌ ಪಿತ್ರೋಡಾ ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Ad
300x250 2

“ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತತ್‌ಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಪಿತ್ರೋಡ ಅವರು ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಸ್ಯಾಮ್‌ ಪಿತ್ರೋಡಾ ಹೇಳಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

Ad
Ad
Nk Channel Final 21 09 2023
Ad