ನವದೆಹಲಿ: ಅ. 1ರವರೆಗೆ ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂದಿನ ವಿಚಾರಣೆಯ ದಿನಾಂಕವಾದ ಅಕ್ಟೋಬರ್ 1 ರವರೆಗೆ ನ್ಯಾಯಾಲಯದ ಅನುಮತಿಯಿಲ್ಲದೆ ಭಾರತದಲ್ಲಿ ಎಲ್ಲಿಯೂ ಆಸ್ತಿಯನ್ನು ನೆಲಸಮ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಆದರೆ ಈ ಆದೇಶವು ಸಾರ್ವಜನಿಕ ರಸ್ತೆಗಳು, ಫುಟ್ಪಾತ್ಗಳು ಮತ್ತು ಇತರ ಯಾವುದೇ ಅನಧಿಕೃತ ನಿರ್ಮಾಣಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ವಿವಿಧ ರಾಜ್ಯಗಳಲ್ಲಿ ಆರೋಪಿಗಳು ಯಾವುದಾರರೂ ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸಿದಾಗ ಅವರ ಮನೆ, ಆಸ್ತಿಗಳನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡುವ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿತ್ತು. ಆತ ಅಪರಾಧಿ ಎಂದು ಸಾಬೀತಾದರೂ ಮನೆಯನ್ನು ಕೆಡವಲು ಯಾರಿಗೂ ಅಧಿಕಾರವಿಲ್ಲ ಎಂದು ಈ ಹಿಂದೆ ಸುಪ್ರೀಂಕೋರ್ಟ್ ಹೇಳಿದೆ.
Ad