ಶಾಜಾಪುರ: ಶಾಲಾ ಬಸ್ ರಸ್ತೆ ಬದಿಗೆ ಪಲ್ಟಿಯಾಗಿರುವ ಘಟನೆ ಮಧ್ಯಪ್ರದೇಶದ ಶಾಜಾಪುರದ ಆಗ್ಖೇಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಈ ಬಸ್ಸಿನಲ್ಲಿ ಸುಮಾರು 20 ಮಕ್ಕಳಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಶಾಲೆಯ ಬಸ್ ಮಕ್ಕಳೊಂದಿಗೆ ಶಾಲೆಗೆ ಬರುತ್ತಿತ್ತು. ಇದೇ ವೇಳೆ ಆಗ್ಖೇಡಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು.
Ad