ದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
96 ವರ್ಷ ವಯಸ್ಸಿನ ಅವರನ್ನು ಮಂಗಳವಾರದಂದು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಯ ಡಾ ವಿನಿತ್ ಸೂರಿ ಆರೈಕೆ ಮಾಡುತ್ತಿದ್ದಾರೆ. ಸದ್ಯ ಮಾಜಿ ಉಪ ಪ್ರಧಾನಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.