ನವದೆಹಲಿ: ಮಥುರಾದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಏಳು ಬಸ್‌ಗಳು ಮತ್ತು ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ದಟ್ಟ ಮಂಜು ಕವಿದ ವಾತಾವರಣದಿಂದಾಗಿ ಮಂದ ಗೋಚರತೆ ಪರಿಣಾಮ ವಾಹನಗಳು ಸರಣಿ ಡಿಕ್ಕಿ ಹೊಡೆದು ಜಖಂಗೊಂಡಿವೆ. ಡಿಕ್ಕಿಯ ನಂತರ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಯಾಣಿಕರಲ್ಲಿ ಭಯಭೀತ ವಾತಾವರಣಕ್ಕೆ ಕಾರಣವಾಗಿರುವುದಾಗಿ ವರದಿ ತಿಳಿಸಿದೆ.

ಅಪಘಾತಕ್ಕೆ ಸಂಬಂಧಪಟ್ಟಂತೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶ್ಲೋಕ್ ಕುಮಾರ್ ಮಾಹಿತಿ ನೀಡಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದೆ ಎಂದು ತಿಳಿಸಿದ್ದಾರೆ.