Bengaluru 25°C
Ad

ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ; ಐವರು ಸಾವು

Train

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಐವರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು.

ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಬರೆದಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ಧಾವಿಸುತ್ತಿದ್ದಾರೆ.

Ad
Ad
Nk Channel Final 21 09 2023
Ad