ಮಹಾರಾಷ್ಟ್ರ : ಕಳೆದ ತಿಂಗಳು ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಶಿಲ್ಪಿ – ಗುತ್ತಿಗೆದಾರ ಜಯದೀಪ್ ಆಪ್ಟೆಯನ್ನು ಥಾಣೆಯಲ್ಲಿ ಬಂಧಿಸಿರುವುದಾಗಿ ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಯನ್ನು ಪ್ರಸ್ತುತ ಉಪ ಪೊಲೀಸ್ ಆಯುಕ್ತರ (ಡಿಸಿಪಿ) ಕಚೇರಿಯಲ್ಲಿ ಇರಿಸಲಾಗಿದ್ದು ಇದರೊಂದಿಗೆ ಶಿವಾಜಿ ಪ್ರತಿಮೆ ಕುಸಿತ ಪ್ರಕರಣದಲ್ಲಿ ಇದುವರೆಗೆ ಇಬ್ಬರ ಬಂಧನವಾದಂತಾಗಿದೆ.
ಒಂಬತ್ತು ತಿಂಗಳ ಹಿಂದೆಯಷ್ಟೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉದ್ಘಾಟನೆ ಗೊಂಡಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಆಗಸ್ಟ್ 26 ರಂದು ಕುಸಿದು ಬಿದ್ದಿದೆ ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಓರ್ವನನ್ನು ಬಂಧಿಸಲಾಗಿದ್ದು ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು ಆರೋಪಿಯನ್ನು ಥಾಣೆಯ ಕಲ್ಯಾಣ್ ನಿಂದ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Ad