Bengaluru 23°C
Ad

ಮತ್ತೆ ಟ್ರಂಪ್ ಮೇಲೆ ಗುಂಡಿನ ದಾಳಿ : ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರು

ಅಮೆರಿಕಾದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆದಿದೆ. ಸ್ವಲ್ಪದರಲ್ಲೇ ಯುಎಸ್ ಮಾಜಿ ಅಧ್ಯಕ್ಷ ಪಾರಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸಮೀಪದಲ್ಲೇ ಗುಂಡಿನ ದಾಳಿಯ ನಂತರ ಅವರು ಸುರಕ್ಷಿತವಾಗಿದ್ದಾರೆ ಎಂದು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿಯ ತಂಡ ತಿಳಿಸಿದೆ.

ಫ್ಲೋರಿಡಾ: ಅಮೆರಿಕಾದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆದಿದೆ. ಸ್ವಲ್ಪದರಲ್ಲೇ ಯುಎಸ್ ಮಾಜಿ ಅಧ್ಯಕ್ಷ ಪಾರಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸಮೀಪದಲ್ಲೇ ಗುಂಡಿನ ದಾಳಿಯ ನಂತರ ಅವರು ಸುರಕ್ಷಿತವಾಗಿದ್ದಾರೆ ಎಂದು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿಯ ತಂಡ ತಿಳಿಸಿದೆ. ಟ್ರಂಪ್ ಅವರ ಸಮೀಪವೇ ನಡೆದ ಗುಂಡಿನ ದಾಳಿಯ ನಂತರ ಅವರು ಸುರಕ್ಷಿತವಾಗಿದ್ದಾರೆ ಎಂದು ಪ್ರಚಾರದ ವಕ್ತಾರ ಸ್ಟೀವನ್ ಚೆಯುಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಅವರ ಗಾಲ್ಫ್ ಕೋರ್ಸ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಶಸ್ತ್ರಾಸ್ತ್ರದೊಂದಿಗೆ ಬಂಧಿಸಲಾಗಿದೆ ಎಂದು ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

 

Ad
Ad
Nk Channel Final 21 09 2023