ನವದೆಹಲಿ: ಹಿರಿಯ ಕಮ್ಯುನಿಸ್ಟ್ ಪಾರ್ಟಿ (ಸಿಪಿಐಎಂ) ನಾಯಕ ಸೀತಾರಾಂ ಯೆಚೂರಿ ಅವರ ಕುಟುಂಬಸ್ಥರು ಇಂದು ಮಧ್ಯಾಹ್ನ ಅವರ ನಿಧನದ ನಂತರ ಸೀತಾರಾಂ ಯೆಚೂರಿ ಅವರ ಮೃತದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ಗೆ ದಾನ ಮಾಡಿದ್ದಾರೆ.
72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ 3.05ಕ್ಕೆ ಅವರು ನಿಧನರಾದರು ಎಂದು ಏಮ್ಸ್ ದೃಢಪಡಿಸಿದೆ. ಟೀಚಿಂಗ್ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಸೀತಾರಾಂ ಯೆಚೂರಿ ಅವರ ಕುಟುಂಬವು ಮೃತದೇಹವನ್ನು ನವದೆಹಲಿಯ AIIMSಗೆ ದಾನ ಮಾಡಿದೆ ಎಂದು ಏಮ್ಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
Ad