Ad

ಆಯೋಧ್ಯೆ ರಾಮ ಮಂದಿರ ಆವರಣದಲ್ಲಿ ಸಿಡಿದ ಗುಂಡು : ಯೋಧ ಸಾವು

ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದ ಆವರಣದಲ್ಲಿ ಸಿಡಿದ ಗುಂಡಿಗೆ ಯೋಧ ಸಾವನಪ್ಪಿದ್ದಾರೆ.

ಆಯೋಧ್ಯೆ : ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದ ಆವರಣದಲ್ಲಿ ಸಿಡಿದ ಗುಂಡಿಗೆ ಯೋಧ ಸಾವನಪ್ಪಿದ್ದಾರೆ. ರಾಮಮಂದಿರ ಆವರಣದಲ್ಲಿ ಭದ್ರತೆಗಾಗಿ ನಿಯೋಜಿಸಿದ್ದ ಉತ್ತರ ಪ್ರದೇಶ ವಿಶೇಷ ಭದ್ರತಾ ಪಡೆಯ ಯೋಧರಾಗಿದ್ದರು. ಈ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಯೋಧನ ಬಂದೂಕಿನಿಂದಲೇ ಆಕಸ್ಮಿಕವಾಗಿ ಗುಂಡು ಹಾರಿದ್ದು, ಅದು ಅವರಿಗೇ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad
300x250 2

ಉತ್ತರ ಪ್ರದೇಶದ ಅಂಬೇಡ್ಕರ್‌ ನಗರದ ನಿವಾಸಿಯಾದ ಶತ್ರುಘ್ನ ವಿಶ್ವಕರ್ಮ (25) ಎಂಬ ಯೋಧ ಮೃತಪಟ್ಟಿದ್ದಾರೆ. ಇವರು ಯುಪಿಎಸ್‌ಎಸ್‌ಎಫ್‌ನ ಪೇದೆಯಾಗಿದ್ದರು. ತಡರಾತ್ರಿ ಅವರ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

 

Ad
Ad
Nk Channel Final 21 09 2023
Ad