ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳವಾರ ಬೆಳಗ್ಗೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸೋನಿಯಾ ಗಾಂಧಿಯವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ಪಕ್ಷ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸೋನಿಯಾ ಗಾಂಧಿ ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದಕ್ಕಾಗಿಯೇ ಅವರು ನಿಯಮಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆಗಾಗ ಆಸ್ಪತ್ರೆಗೆ ಭೇಟಿ ನೀಡುತ್ತಿರುತ್ತಾರೆ. ಈ ನಡುವೆ ಮಂಗಳವಾರ ಬೆಳಗ್ಗೆ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಬಗ್ಗೆ ಡಿಸಿಎಂ ಡಿಕೆ ಕೆಶಿಕುಮಾರ್ ಅವರ ಬಳಿ ಮಾಧ್ಯಮದವರು ಪ್ರಶ್ನಿಸಿದಾಗ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದಿದ್ದಾರೆ.

