Bengaluru 22°C
Ad

ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Birla

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

Ad
300x250 2

ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.

Ad
Ad
Nk Channel Final 21 09 2023
Ad