ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ ಕರೆಯಲಾಗಿದ್ದು ಅಂದು ವಿಶೇಷ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಆಯ್ಕೆ ಸೇರಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ ಆರಂಭವಾಗುತ್ತದೆ. ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.