Ad

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಮೃತ್ಯು, 400ಕ್ಕೂ ಅಧಿಕ ಮಂದಿಗೆ ಗಾಯ

ಒಡಿಶಾದಲ್ಲಿ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ ವೇಳೆಯೂ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಪುರಿ: ಒಡಿಶಾದಲ್ಲಿ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ ವೇಳೆಯೂ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Ad
300x250 2

ಭಾನುವಾರ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲು ಆಗದೆ ಒಬ್ಬ ಭಕ್ತ ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತ ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಕಾಲ್ತುಳಿತದ ಬಳಿಕ 300 ಜನರನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಸ್‌ಚಾರ್ಜ್‌ ಮಾಡಲಾಗಿದೆ. ಯಾರಿಗೂ ಗಂಭೀರವಾಗಿ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂಬುದಾಗಿ ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

Ad
Ad
Nk Channel Final 21 09 2023
Ad