ಕೇರಳ: ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿರುವುದು ಹೆಚ್ಚಾಗುತ್ತಿದೆ. ಕೇರಳದ ಎರ್ನಾಕುಲಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದು, ರೈಲಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ 4.30ರ ಸುಮಾರಿಗೆ ಪಾಲಕ್ಕಾಡ್ ಜಿಲ್ಲೆಯ ಪರಾಲಿ ಬಳಿ ಈ ದುಷ್ಕೃತ್ಯ ನಡೆದಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆ ಆಗಿಲ್ಲ.
ಒಂದು ಕಿಟಕಿಯ ಗಾಜಿಗೆ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ರೈಲ್ವೆ ರಕ್ಷಣಾ ತಂಡ(ಆರ್‌ಪಿಎಫ್) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ ರೈಲ್ವೆ ಪೊಲೀಸರು ಮತ್ತು ಆರ್‌ಪಿಎಫ್ ತಂಡ ಸದ್ಯ ಪರಾಲಿಯಲ್ಲಿ ಬೀಡುಬಿಟ್ಟಿದೆ.

