Bengaluru 24°C
Ad

ಪ್ರಚಾರಕ್ಕೆ ತೆರಳಿದ್ದ ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ

ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದ್ದು,ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು,

ಹಿಮಾಚಲಪ್ರದೇಶ: ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದ್ದು,ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸೋಮವಾರ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರಕ್ಕೆಂದು ಕಂಗನಾ ತೆರಳುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

 

Ad
Ad
Nk Channel Final 21 09 2023
Ad