ಮುಂಬೈ:  ಶೈಕ್ಷಣಿಕ ಒತ್ತಡ ತಾಳಲಾರದೇ ವಿದ್ಯಾರ್ಥಿಯೊರ್ವ 7ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಮುಂಬೈನ ಪಶ್ಚಿಮ ಮಲಾಡ್‌ನಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿ ಧ್ರುವಿಲ್ ವೋರಾ(22) ಮೊದಲ ವರ್ಷದ ಎಮ್‌ಬಿಎ ವ್ಯಾಸಾಂಗ ಮಾಡುತ್ತಿದ್ದು, ಶುಕ್ರವಾರ(ಜು.26) ಸಂಜೆ 7 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಮನೆಗೆ ಬಂದು ತಾಯಿ ಮತ್ತು ಸಹೋದರಿಯೊಂದಿಗೆ ಸಾಮಾನ್ಯವಾಗಿ ಮಾತನಾಡಿದ್ದ ಧ್ರುವಿಲ್, ಬಳಿಕ ಕೆಲಸಕ್ಕಾಗಿ ಹೊರಗೆ ಹೋಗಿದ್ದ ತನ್ನ ತಂದೆಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ. ಕೆಲ ಹೊತ್ತಿನ ನಂತರ ಸ್ಕೂಟರ್ ರಿಪೇರಿಗಾಗಿ ತೆಗೆದುಕೊಂಡು ಹೋಗುವ ನೆಪದಲಿ ಮನೆಯಿಂದ ಹೊರಟು, ಸೀದಾ ಕಟ್ಟಡದ ಏಳನೇ ಮಹಡಿಗೆ ಹೋಗಿ ಜಿಗಿದಿದ್ದಾರೆ.ಮಲಾಡ್ ಪೊಲೀಸರು ಶುಕ್ರವಾರ ಆಕಸ್ಮಿಕ ಸಾವಿನ ಎಂದು ವರದಿಯನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.