Bengaluru 22°C
Ad

ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚೆಗೆ ಹೆಚ್ಚಿನ ವಿದ್ಯಾರ್ಥಿಗಳು ದುಡುಕಿ ಸಾವಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಅಂತಹದ್ದೆ ಘಟನೆ ನಡೆದಿದ್ದು NEET-UG ಪರೀಕ್ಷೆಯಲ್ಲಿ ಕಡಿಮೆ ಮಾರ್ಕ್ಸ್‌ ಬಂದಿದ್ದಕ್ಕೆ ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ರಾಜಸ್ಥಾನದ ಕೋಟಾದ ಜವಾಹರ್ ನಗರದಲ್ಲಿ ನಡೆದಿದೆ.

ಭೂಪಾಲ್‌:  ಇತ್ತೀಚೆಗೆ ಹೆಚ್ಚಿನ ವಿದ್ಯಾರ್ಥಿಗಳು ದುಡುಕಿ ಸಾವಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಅಂತಹದ್ದೆ ಘಟನೆ ನಡೆದಿದ್ದು NEET-UG ಪರೀಕ್ಷೆಯಲ್ಲಿ ಕಡಿಮೆ ಮಾರ್ಕ್ಸ್‌ ಬಂದಿದ್ದಕ್ಕೆ ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ರಾಜಸ್ಥಾನದ ಕೋಟಾದ ಜವಾಹರ್ ನಗರದಲ್ಲಿ ನಡೆದಿದೆ.

ನೀಟ್‌ ಫಲಿತಾಂಶ ಬಿಡುಗಡೆಯಾದ ಎರಡೇ ದಿನಕ್ಕೆ ಒಂದು ಜೀವ ಬಲಿಯಾಗಿದೆ. ಜೂನ್ 4ರಂದು NEET-UG ಫಲಿತಾಂಶ ಪ್ರಕಟಗೊಂಡಿತ್ತು. ಇನ್ನು ಮೂಲಗಳ ಪ್ರಕಾರ NEET-UG ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿದ್ಯಾರ್ಥಿತಿನಿ 5ನೇ ಮಹಡಿಯಿಂದ ಜಿಗಿಯುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇನ್ನು, ವಿದ್ಯಾರ್ಥಿನಿ ಕಟ್ಟಡದಿಂದ ಜಿಗಿದ ಕೂಡಲೇ ಮತ್ತೊಬ್ಬ ಯುವತಿ ಕೆಳಗಡೆ ಓಡಿ ಹೋಗಿದ್ದಾಳೆ. ಆ ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಫಲಿಸದೇ ಒಂದು ಗಂಟೆಯ ಬಳಿಕ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಅಂತ ವೈದ್ಯರು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad