Bengaluru 24°C

ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್: ನೀರಿಗೆ ಬಿದ್ದು ಯುವಕ ಮೃತ್ಯು

ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಲು ಪ್ರಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ದುರಂತವಾಗಿ ಮುಳುಗಿ ಸಾವನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

ಮಹಾರಾಷ್ಟ್ರ: ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಲು ಪ್ರಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ದುರಂತವಾಗಿ ಮುಳುಗಿ ಸಾವನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.


ವರದಿಗಳ ಪ್ರಕಾರ, ನಾಗ್ಪುರ ಜಿಲ್ಲೆಯ ಉಮ್ರೆಡ್ ಸಿಟಿ ಬಳಿಯ ಮಕರ್ಧೋಕಡ ಅಣೆಕಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಜೆ ಈ ಘಟನೆ ನಡೆದಿದೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಮಕರಧೋಕಡ ಅಣೆಕಟ್ಟಿನಲ್ಲಿ ಅನೇಕ ಪ್ರವಾಸಿಗರು ಬಂದಿದ್ದರು.


ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿದ್ದರು. ಅವರಲ್ಲಿ ಒಬ್ಬ ಯುವಕ ಡ್ಯಾಮ್ ಮೇಲೆ ಹತ್ತಲು ಪ್ರಯತ್ನಿಸಿದ್ದಾನೆ. ಆದರೆ ಯುವಕ ಸಾಹಸ ಮಾಡಲು ಹೋಗಿ ದುರದೃಷ್ಟಕರವಾಗಿ ಸಾವಿಗೀಡಾಗಿದ್ದಾನೆ. ಇದನ್ನು ಅಲ್ಲಿಗೆ ಬಂದಿದ್ದ ಪ್ರವಾಸಿಗರೊಬ್ಬರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ವೈರಲ್ ಆಗಿದೆ.


ವ್ಯಕ್ತಿಯೊಬ್ಬರು ಅಣೆಕಟ್ಟಿನ ಗೋಡೆಯ ಮೇಲೆ ನಿಂತಿದ್ದಾನೆ. ಆಗ ಇಬ್ಬರು ಯುವಕರು ಅವನನ್ನು ರಕ್ಷಿಸಲು ಪ್ರಯತ್ನಿಸಿದರು, ಒಬ್ಬರು ಅವನನ್ನು ಕೆಳಗಿಳಿಸಲು ಸಹಾಯ ಮಾಡಲು ಕೈ ಚಾಚಿದರು. ಆದಾಗ್ಯೂ, ಅವನು ಅವರ ಸಹಾಯವನ್ನು ನಿರಾಕರಿಸಿದ. ನಂತರ ಸಹಾಯಕ್ಕೆ ಬಂದ ಯುವಕರು ಕೆಳಗೆ ಜಾರಿ ಬಿದ್ದಿದ್ದಾರೆ. ಆಮೇಲೆ ಆ ವ್ಯಕ್ತಿ ಇದ್ದಕ್ಕಿದ್ದಂತೆ ಸಮತೋಲನವನ್ನು ಕಳೆದುಕೊಂಡು ಅಣೆಕಟ್ಟಿನ ಇನ್ನೊಂದು ಬದಿಯಲ್ಲಿ, ನದಿಗೆ ಬಿದ್ದು ಮುಳುಗಿ ಸಾವಿಗೀಡಾಗಿದ್ದಾನೆ.


https://x.com/republic/status/1824378211754487816?


Nk Channel Final 21 09 2023