ದೆಹಲಿ: ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಘಟನೆ ಇಡೀ ಭಾರತವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಯಲ್ಲಿ ಇದುವರೆಗೆ 350ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸದ್ಯ ಪರಿಹಾರ ಕಾರ್ಯಗಳು ನಡೆಯುತ್ತಿವೆ. ವಯನಾಡಿನ ಸ್ಥಿತಿ ಕಂಡು ಅನೇಕ ಸಿನಿಮಾ ಸ್ಟಾರ್ಸ್​ ಮರುಗಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡಲು ಮುಂದೆ ಬರುತ್ತಿದ್ದಾರೆ. ಜೈಲಿನಲ್ಲಿರುವ ಜಾಕ್ವೆಲಿನ್ ಫರ್ನಾಂಡಿಸ್ ಬಾಯ್ ​​ಫ್ರೆಂಡ್​​ ಸುಕೇಶ್ ಚಂದ್ರಶೇಖರ್ 15 ಕೋಟಿ ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ವಯನಾಡು ದುರಂತ ಕಂಡು ಅನೇಕರು ಮರುಗಿದ್ದಾರೆ. ಕೇರಳ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 15 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಸುಕೇಶ್ ಚಂದ್ರಶೇಖರ್ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಸಂತ್ರಸ್ತರಿಗೆ 300 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಪತ್ರದಲ್ಲಿ ಬರೆದಿದ್ದಾರೆ.

ಇದು ಸುಕೇಶ್ ಚಂದ್ರಶೇಖರ್ ಅವರು ಕಾನೂನು ಬದ್ಧ ಖಾತೆಯಿಂದ ನೀಡಲಾಗುವುದು. ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ಸ್ವೀಕರಿಸಲು ಮತ್ತು ಭೂಕುಸಿತ ದುರಂತದಲ್ಲಿ ಸಂತ್ರಸ್ತರ ಕಲ್ಯಾಣ ಮತ್ತು ಪುನರ್ವಸತಿಗೆ ಬಳಸಿಕೊಳ್ಳುವಂತೆ ವಿನಂತಿಸುವುದಾಗಿ ಸುಕೇಶ್ ಚಂದ್ರಶೇಖರ್ ಪತ್ರದಲ್ಲಿ ಬರೆದಿದ್ದಾರೆ.

ಮಂಡೋಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಕೇರಳವು ಏನಾಗುತ್ತಿದೆ ಎಂಬುದನ್ನು ನೋಡಲು ನನಗೆ ತುಂಬಾ ನೋವಾಗಿದೆ ಮತ್ತು ಅಗತ್ಯವಿರುವ ಈ ಸಮಯದಲ್ಲಿ ಬೆಂಬಲ ನೀಡಲು ಬಯಸುತ್ತೇನೆ ಎಂದು ಹೇಳಿದ್ರು. ಚಂದ್ರಶೇಖರ್ ಬರೆದಿರುವ ಪತ್ರ ಎಂದು ಅವರ ಪರ ವಕೀಲ ಅನಂತ್ ಮಲಿಕ್ ತಿಳಿಸಿದ್ದಾರೆ.