ದೆಹಲಿ : ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರೀವಾಲ್ ರಾಜಿನಾಮೆ ನೀಡಿದ್ದಾರೆ. ಇನ್ನು ಎರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಈ ಬೆನ್ನಲ್ಲೇ ಅವರ ಉತ್ತಾರಧಿಕಾರಿ ಯಾರಗುತ್ತಾರೆ ಎಂದು ವ್ಯಾಪಕ ವದಂತಿಗಳು ಹಾರಿದಾಡುತ್ತಿವೆ. ಈ ಬಗ್ಗೆ ಕೇಜ್ರಿವಾಲ್ ಸಾರ್ವಜನಿಕರು ಪ್ರಾಮಾಣಿಕತೆ ಪ್ರಮಾಣ ಪತ್ರ ನೀಡಿದಾಗ ಮಾತ್ರ ಸಿಎಂ ಕುರ್ಚಿ ಮೇಲೆ ಮತ್ತೆ ಕುಳಿತುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ನಂತರ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ನ್ಯಾಯಾಲಯದಿಂದ ಜಾಮೀನು ಪಡೆದರು. ಈ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸೆಪ್ಟೆಂಬರ್ 13 ರಂದು ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.
ಇನ್ನು ವದಂತಿಗಳಲ್ಲಿ ಕೇಜ್ರಿವಾಲ್ ಪತ್ನಿ ಸುನಿತಾ ಹಾಗೂ ಸಚಿವೆ ಅತಿಶಿ ಮತ್ತು ಗೋಪಾಲ್‌ರಾಯ್ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಸದ್ಯ ಇವರೆಲ್ಲಾ ಮುಖ್ಯಮಂತ್ರಿ ರೇಸ್‌ನಲ್ಲಿ ಇದ್ದಾರೆ. ಫೆಬ್ರವರಿ 2025 ರಲ್ಲಿ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆಮ್ ಆದ್ಮಿ ಪಕ್ಷ ವಿಧಾನಸಭೆ ವಿಸರ್ಜಿಸದಿದ್ದರೂ, ನವೆಂಬರ್‌ನಲ್ಲಿ ಚುನಾವಣೆ ನಡೆಸುವುದು ಚುನಾವಣಾ ಆಯೋಗಕ್ಕೆ ಸುಲಭವಲ್ಲ.