Bengaluru 22°C
Ad

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಜಾಮೀನು ಮಂಜೂರು

Cm (1)

ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸೆರೆವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ ಶುಕ್ರವಾರ (ಸೆ. 13) ಜಾಮೀನು ಮಂಜೂರು ಮಾಡಿದೆ.

ತಮ್ಮ ಬಂಧನ ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ ರಿಲೀಫ್​ ನೀಡಿದೆ.ತನಿಖೆಯ ಉದ್ದೇಶಕ್ಕಾಗಿ ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಬಂಧನದಲ್ಲಿರುವ ವ್ಯಕ್ತಿಯನ್ನು ಬಂಧಿಸಲು ಯಾವುದೇ ಅಡ್ಡಿಯಿಲ್ಲ ಎಂದು ನ್ಯಾಯಪೀಠ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡದಂತೆ ಕೇಜ್ರಿವಾಲ್​ಗೆ ತಾಕೀತು ಮಾಡಿರುವ ನ್ಯಾಯಾಲಯ ಜಾರಿ ನಿರ್ದೇಶನಾಲಯದ ವಿಷಯದಲ್ಲಿ ವಿಧಿಸಲಾದ ಷರತ್ತುಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು ಹೇಳಿ ಜಾಮೀನು ಮಂಜೂರು ಮಾಡಿದೆ.

Ad
Ad
Nk Channel Final 21 09 2023