Bengaluru 30°C

ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ : ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌

ಕೋಲ್ಕತಾದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ  ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕೆಲವೊಂದು ಕಡೆ ಇದು ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಮಧ್ಯಪ್ರದೇಶ ಮಾಡಲಿದೆ.

ನವದೆಹಲಿ: ಕೋಲ್ಕತಾದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ  ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕೆಲವೊಂದು ಕಡೆ ಇದು ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಮಧ್ಯಪ್ರದೇಶ ಮಾಡಲಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.


 

Nk Channel Final 21 09 2023