ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.ಸಿಆರ್‌ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಕೇಳಬಹುದು ಎಂದು ನ್ಯಾಯಾಲಯವು ಮಹತ್ವದ ನಿರ್ಧಾರದಲ್ಲಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಮುಸ್ಲಿಂ ಮಹಿಳೆಯರು ತಮ್ಮ ಗಂಡನಿಂದ ಜೀವನಾಂಶ ಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ತನ್ನ ಪತ್ನಿಗೆ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಬುಧವಾರ ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.

