ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ.
ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ನ್ಯಾಯಾಲಯ ಎಚ್ಚರಿಕೆ ನೀಡಿದೆ.ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಕಿರಿಯ ವೈದ್ಯರು ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಕುಂದುಕೊರತೆಗಳನ್ನು ಪರಿಗಣಿಸಿ ಆದೇಶ ಹೊರಡಿಸಿದ್ದಾರೆ.
Ad