ಮಡಿಕೇರಿ : ಸರಕಾರಿ ಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.

ಚೇರಂಬಾಣೆ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ (51) ಮೃತರು. ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.