ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಐರ್ಲೆಂಡ್‌ನಲ್ಲಿ ತುರ್ತು ಲ್ಯಾಂಡ್ ಆಗಿದೆ.

ಮಾ.15ರಂದು ದೆಹಲಿಗೆ ಹೊರಟಿದ್ದ AI102ವಿಮಾನವು ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣದಿಂದ ಮಧ್ಯಾಹ್ನ ಟೇಕ್ ಆಫ್ ಆಗಿತ್ತು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದಂತೆ ಭಾವಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಐರ್ಲೆಂಡ್‌ನ ಶಾನನ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಲು ಕಾರಣವೇನು ಎನ್ನುವ ಬಗ್ಗೆ ತಪಾಸಣೆ ನಡೆಯುತ್ತಿದೆ.