ಮಧ್ಯಪ್ರದೇಶ: ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.
ದೇವಸ್ಥಾನದ ಪಕ್ಕದಲ್ಲಿ ಶೆಡ್ ಹಾಕಿಕೊಂಡು ಮಕ್ಕಳು ಶಿವಲಿಂಗ ಮಾಡುತ್ತಿದ್ದರು, ಶಿಥಿಲಗೊಂಡಿದ್ದ ದೇವಸ್ಥಾನದ ಗೋಡೆ ಕುಸಿತ ಮಕ್ಕಳು ಸಾವನ್ನಪ್ಪಿದ್ದಾರೆ. ಎಲ್ಲರೂ 10 ರಿಂದ 14 ವರ್ಷದೊಳಗಿನವರು ಎನ್ನಲಾಗಿದೆ.
ಗಾಯಗೊಂಡ ಮಕ್ಕಳಲ್ಲಿ ಒಬ್ಬನನ್ನು ದಾಮೋಹ್‌ಗೆ ಮತ್ತು ಉಳಿದವರನ್ನು ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಸ್ಥಾನದಲ್ಲಿ ನಡೆಯಲಿರುವ ಭಗವತ್ ಕಥಾಗಾಗಿ ಶಿವಲಿಂಗವನ್ನು ಮಕ್ಕಳು ಸಿದ್ಧಪಡಿಸುತ್ತಿದ್ದರು.
ಘಟನಾ ಸ್ಥಳದಲ್ಲಿ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಗೋಪಾಲ ಭಾರ್ಗವ ಭೇಟಿ ನೀಡಿದ್ದಾರೆ. ದ್ಯ ಮಕ್ಕಳ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ನಂತರ ಇದೀಗ ಸರ್ಕಾರವೂ ಕ್ರಮಕ್ಕೆ ಮುಂದಾಗಿದೆ. ಅಪಘಾತದ ತನಿಖೆಗೆ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಆದೇಶಿಸಿದ್ದಾರೆ. ಇದರೊಂದಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಮೋಹನ್ ಯಾದವ್ ಹೇಳಿದ್ದಾರೆ.