ಉತ್ತರಾಖಂಡ: ರುದ್ರಪ್ರಯಾಗದ ಹೃಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ ಟೆಂಪೊವೊಂದು ಕಣಿವೆಗೆ ಬಿದ್ದು ಒಟ್ಟು 10 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಇಂದು (ಶನಿವಾರ) 23 ಪ್ರಯಾಣಿಕರಿದ್ದ ಟೆಂಪೋ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯವನ್ನು ನಡೆಸುತ್ತಿವೆ ಎಂದು ಎಎನ್‌ಐ ವರದಿ ಮಾಡಿದೆ.
ಈ ಘಟನೆ ಕುರಿತು ಪ್ರತಿಕ್ರಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದಿದ್ದಾರೆ.

