Ad

ಟೆಂಪೋ ಕಣಿವೆಗೆ ಬಿದ್ದು ಸ್ಥಳದಲ್ಲೇ 10 ಮಂದಿ ದುರ್ಮರಣ

ಉತ್ತರಾಖಂಡದ ರುದ್ರಪ್ರಯಾಗದ ಹೃಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ ಟೆಂಪೊವೊಂದು ಕಣಿವೆಗೆ ಬಿದ್ದು ಒಟ್ಟು 10 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಉತ್ತರಾಖಂಡ:  ರುದ್ರಪ್ರಯಾಗದ ಹೃಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ ಟೆಂಪೊವೊಂದು ಕಣಿವೆಗೆ ಬಿದ್ದು ಒಟ್ಟು 10 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

Ad
300x250 2

ಇಂದು (ಶನಿವಾರ) 23 ಪ್ರಯಾಣಿಕರಿದ್ದ ಟೆಂಪೋ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯವನ್ನು ನಡೆಸುತ್ತಿವೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಘಟನೆ ಕುರಿತು ಪ್ರತಿಕ್ರಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದಿದ್ದಾರೆ.

Ad
Ad
Nk Channel Final 21 09 2023
Ad