ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ನಿನ್ನೆ ರಾತ್ರಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 45 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತಕ್ಕೆ ಕಾರು ರಾಂಗ್ ರೂಟ್ನಿಂದ ಬಂದಿರೋದೇ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಎಕ್ಸ್ಪ್ರೆಸ್ವೇನಿಂದ ಕೆಳಗೆ ಬಿದ್ದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ದುರ್ಘಟನೆ ಬಗ್ಗೆ ಎಸ್ಎಸ್ಪಿ ಸಂಜಯ್ ಕುಮಾರ್ ಮಾತನಾಡಿ, ಶನಿವಾರ ರಾತ್ರಿ ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಕಾರು ರಸ್ತೆಯಿಂದ ನೆಲಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರಿನಲ್ಲಿದ್ದವರು ಮೂವರು, ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್ ಲಕ್ನೋದಿಂದ ಆಗ್ರಾಗೆ ತೆರಳುತ್ತಿತ್ತು. ಇದೇ ವೇಳೆ ರಾಂಗ್ ಸೈಡ್ನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.