ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಗಾಯಗೊಂಡಿರುವ ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಕಳೆದ ಎರಡು ದಿನಗಳಲ್ಲಿ ನಡೆದ ಎರಡನೇ ಉಗ್ರ ದಾಳಿ ಇದಾಗಿದೆ. ಆರಂಭಿಕ ದಾಳಿಯನ್ನು ವಿಫಲಗೊಳಿಸಲಾಗಿದ್ದು, ಎನ್‌ಕೌಂಟರ್ ನಡೆಯುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಗಡಿಯನ್ನು ಇದು ಹೊಂದಿದೆ.