ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕೇರಳದ ವಯನಾಡ್ ಗೆ ಭೇಟಿ ನೀಡಲಿದ್ದಾರೆ. ಕಳೆದ ತಿಂಗಳು ಕೇರಳವನ್ನು ಅಪ್ಪಳಿಸಿದ ಭೂಕುಸಿತ ದುರಂತದಲ್ಲಿ ಗಾಯಗೊಂಡ ಸಂತ್ರಸ್ತರ ಆರೋಗ್ಯ ವಿಚಾರಿಸಿ ವಯನಾಡಿನ ಜನರ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿಯವರು ವಿಶೇಷ ವಿಮಾನದಲ್ಲಿ ಕಣ್ಣೂರಿಗೆ ಆಗಮಿಸಲಿದ್ದಾರೆ.ಕಣ್ಣೂರಿನಿಂದ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಅವರು ಪ್ರಸ್ತುತ 10,000 ಕ್ಕೂ ಹೆಚ್ಚು ಜನರು ಆಶ್ರಯ ಪಡೆದಿರುವ ಕೆಲವು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿಗೆ ಆಗಮಿಸಿದ ನಂತರ ಪ್ರಧಾನಿ ಮೋದಿ ಅವರೊಂದಿಗೆ ಬರುವ ನಿರೀಕ್ಷೆಯಿದೆ.
Ad