ಕೇರಳ: ಎಡನೀರು ಮಠದ ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರನ್ನು ಕೇರಳದ ಕಾಸರಗೋಡು ಜಿಲ್ಲೆಯ ಬೋವಿಕಾನ ಎಂಬಲ್ಲಿ ತಡೆಯೊಡ್ಡಿ ದಾಳಿ ನಡೆಸಿದ ಪ್ರಕರಣ ನಡೆದಿದೆ. ದ.ಕ ಜಿಲ್ಲೆಯ ಗಡಿಭಾಗವಾದ ಕೇರಳದ ಕಾಸರಗೋಡಿನಲ್ಲಿರುವ ಎಡನೀರು ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಎಡನೀರು ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದ್ದಾರೆ.
ಭೇಟಿ ಬಳಿಕ ಕೇರಳದ ಕಮ್ಯುನಿಸ್ಟ್ ಸರ್ಕಾರದ ವಿರುದ್ದ ನಳಿನ್ ಕಟೀಲ್ ವಾಗ್ದಾಳಿ ನಡೆಸಿದರು. ಶ್ರೀಗಳ ಕಾರು ತಡೆದು ಕಲ್ಲು ತೂರಾಟ ನಡೆಸಿದ ಘಟನೆ ಖಂಡನೀಯವಾಗಿದೆ.
ಅನ್ಯಕೋಮಿನ ಯುವಕರ ತಂಡದಿಂದ ಕಾರು ತಡೆದು ಗಲಾಟೆ ಅರೋಪ ಕೇಳಿಬಂದಿದೆ.
ಕಾಸರಗೋಡು ಜಿಲ್ಲೆಯ ಎಡನೀರು ಮಠ 400 ವರ್ಷಗಳ ಇತಿಹಾಸ ಹೊಂದಿದೆ. ಕಾಸರಗೋಡಿನ ಬೋವಿಕಾನ–ಇರಿಯಣ್ಣಿ ಮಾರ್ಗ ಮಧ್ಯೆ ತಡೆ ಆರೋಪ ಕೇಳಿಬಂದಿದೆ. ಕೇರಳ ಸರ್ಕಾರ ಸ್ವಯಂ ಪ್ರೇರಿತ ಕೇಸು ದಾಖಲಿಸಿ ಆರೋಪಿಗಳನ್ನು ಬಂಧಿಸಬೇಕಿತ್ತು. ಆದರೆ ಘಟನೆ ನಡೆದು ಎರಡು ದಿನವಾದ್ರೂ ಆರೋಪಿಗಳ ಬಂಧನ ಆಗಿಲ್ಲ.
ಮತಬ್ಯಾಂಕ್ ಹಿಂದೆ ಬಿದ್ದಿರೋ ಕೇರಳದ ಕಮ್ಯುನಿಸ್ಟ್ ಸಿಎಂ ಪಿನರಾಯಿ ವಿಜಯನ್ ಘಟನೆಯನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇರಳ ಗೃಹ ಸಚಿವರು ಕೂಡ ಪ್ರಕರಣದ ತನಿಖೆಗೆ ಆದೇಶ ಮಾಡಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಮತ್ತಷ್ಟು ಘಟನೆ ನಡೀಬಹುದು ಎಂಬ ಭಯ ಶುರುವಾಗಿದೆ.
ಕಮ್ಯುನಿಸ್ಟ್ ಸರ್ಕಾರ ಮತಾಂಧ ಶಕ್ತಿಗಳ ಹಿಂದೆ ನಡೀತಾ ಇದೆ ಅನಿಸ್ತಾ ಇದೆ. ಕಾಸರಗೋಡು ಜಿಲ್ಲೆಯಲ್ಲಿ ದೇವಸ್ಥಾನಗಳಿಗೆ ಕಳ್ಳರು ನುಗ್ತಾ ಇದಾರೆ. ಈ ಭಾಗದ ದೇವಸ್ಥಾನಗಳ ಮೇಲೆ ನಿರಂತರ ದಾಳಿ ನಡೀತಾ ಇದೆ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪಿನರಾಯಿ ಸರ್ಕಾರ ಎಡವಿದೆ. ಸ್ವಾಮೀಜಿಗಳ ಜೊತೆ ಇಡೀ ಹಿಂದೂ ಸಮಾಜ ಇದೆ, ಕೈ ಕಟ್ಟಿ ಕುಳಿತುಕೊಳ್ಳೋ ಪ್ರಶ್ನೆಯೇ ಇಲ್ಲ ಎಂದರು.