ನವದೆಹಲಿ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ ವಿಜಯ ದಿವಸದಂದೇ ಎಚ್ಚರಿಕೆ ನೀಡಿದ್ದಾರೆ. ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.