Bengaluru 22°C
Ad

ಸಮಾಜವಾದಿ ಪಕ್ಷದ ಶಾಸಕನಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್‌ ಸೋಲಂಕಿಗೆ  7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕಾನ್ಪುರದ ಸಂಸದ-ಶಾಸಕ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಲಕ್ನೋ: ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್‌ ಸೋಲಂಕಿಗೆ  7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕಾನ್ಪುರದ ಸಂಸದ-ಶಾಸಕ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಕಾನ್ಪುರದ  ಜಾಜ್ಮೌ ಪ್ರದೇಶದಲ್ಲಿ ವಿಡಿಪಿಡಬ್ಲ್ಯೂ ಅವರ ಮನೆಗೆ ಬೆಂಕಿ ಹಚ್ಚಿ ಮನೆ ಸುಟ್ಟ ಪ್ರಕರಣದಲ್ಲಿ ಶಾಸಕ ಇರ್ಫಾನ್‌ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆತನ ಸಹೋದರ ರಿಜ್ವಾನ್ ಸೋಲಂಕಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಲ್ಲರಿಗೂ ಶಿಕ್ಷೆ ವಿಧಿಸಲಾಗಿದೆ.

ಕೋರ್ಟ್‌ ಆದೇಶದಿಂದಾಗಿ ಸೋಲಂಕಿ, ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾಗುವ ಯಾವುದೇ ಶಾಸಕರು ತಮ್ಮ ಸ್ಥಾನದಿಂದ ಅನರ್ಹರಾಗುತ್ತಾರೆ.

ಗಂಭೀರ ಕ್ರಿಮಿನಲ್‌ ಅಪರಾಧ ಹೊಂದಿರುವ ವ್ಯಕ್ತಿ ಶಾಸಕರಾಗಿ ಸೇವೆ ಸಲ್ಲಿಸಲು ಸಾಧ್ಯವಿಲ್ಲ ಎಂದು ಕಾನೂನು ಹೇಳುತ್ತದೆ. ಪ್ರತಿ ಅಪರಾಧಿಗೆ ಒಟ್ಟು 30,500 ರೂ. ದಂಡವನ್ನು ವಿಧಿಸಲಾಗಿದೆ.

ನಜೀರ್‌ ಫಾತಿಮಾ ಪರವಾಗಿ ಜಾಜ್ಮೌ ಪೊಲೀಸ್‌ ಠಾಣೆಯಲ್ಲಿ 2022ರ ನವೆಂಬರ್‌ 8 ರಂದು ಪ್ರಕರಣ ದಾಖಲಾಗಿತ್ತು.

Ad
Ad
Nk Channel Final 21 09 2023
Ad