Bengaluru 22°C
Ad

ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿಯ ತನಿಖೆಯನ್ನು ಎನ್‍ಐಎಗೆ ಹಸ್ತಾಂತರ

ಜಮ್ಮು ಕಾಶ್ಮೀರದಲ್ಲಿ ಬಸ್ ಮೇಲೆ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಬಸ್ ಮೇಲೆ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಮತ್ತು ಅಮರನಾಥ ಯಾತ್ರೆಯ ಸಿದ್ಧತೆಗಳ ಬಗ್ಗೆ ಭಾನುವಾರ ಸಭೆ ನಡೆಸಿದ್ದರು.

ಅಲ್ಲದೇ ರಿಯಾಸಿ ಜಿಲ್ಲೆಯಲ್ಲಿ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿ ಮತ್ತು ಇತರ ಕೆಲವು ಭಯೋತ್ಪಾದಕ ಘಟನೆಗಳ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತು. ಸಭೆಯ ಬಳಿಕ ಈ ಬೆಳವಣಿಗೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

 

Ad
Ad
Nk Channel Final 21 09 2023
Ad