Bengaluru 22°C
Ad

ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್ ವಜಾ!

ಮಹಿಳೆಯರ ಮೇಲೆ ನಡೆಸಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನವದೆಹಲಿ: ಮಹಿಳೆಯರ ಮೇಲೆ ನಡೆಸಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

Ad

ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Ad

ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.

Ad
Ad
Ad
Nk Channel Final 21 09 2023