ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟಿಗೆ ಸಲ್ಲಿಸಿದ್ದ ಜಾಮೀನು ಅರ್ಜಿನ್ನು ಹೈಕೋರ್ಟ್ ವಜಾಗೊಳಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿ ಕಸ್ಟಡಿಗೆ ನೀಡಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದರು. ಇದೀಗ ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಕೇಜ್ರಿವಾಲ್ ಮತ್ತು ಸಿಬಿಐ ಪರ ವಕೀಲರ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಜುಲೈ 29 ರಂದು ಎಎಪಿ ನಾಯಕನ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.
ಈಗ ರದ್ದುಪಡಿಸಲಾದ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಜುಲೈ 17 ರಂದು ಕಾಯ್ದಿರಿಸಿತ್ತು.
ಜಾಮೀನು ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಾಲಯವು ಅದನ್ನು ವಿಲೇವಾರಿ ಮಾಡಿದೆ, ಹೆಚ್ಚಿನ ಪರಿಹಾರಕ್ಕಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವ ಆಯ್ಕೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದೆ.