ಛತ್ತೀಸ್ ಗಢ: ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಮೃತಪಟ್ಟಿರುವ ಘಟನೆ ರವಿವಾರ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವ್ಹಾಣ್‌, “ಮಾವೋವಾದಿಗಳ ಕುರಿತ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ನಡೆಸಿದೆ. ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ” ಎಂದು ತಿಳಿಸಿದ್ದಾರೆ.