ಮೀರತ್: ಮೂರು ಅಂತಸ್ತಿನ ಕಟ್ಟಡ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿದ್ದು, 15 ಮಂದಿ ಸಿಲುಕಿಕೊಂಡಿರುವ ಘಟನೆ ಜಾಕಿರ್ ಕಾಲೋನಿಯಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
14 ಜನರನ್ನು ರಕ್ಷಿಸಲಾಗಿದ್ದು, ಅದರಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿಯನ್ನು ರಕ್ಷಿಸಲು ರಕ್ಷಣಾ ತಂಡ ಇದೀಗ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ದುರಂತದ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಜಾಕಿರ್ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟದ ಕುಸಿದಿರುವುದು ಬೇಸರದ ಸಂಗತಿಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ಹೇಳಿದ್ದಾರೆ.
Ad