Bengaluru 22°C
Ad

ಫುಟ್ಬಾಲ್ ಆಡುತ್ತಿದ್ದ ಮಕ್ಕಳ ಮೇಲೆ ಬಿದ್ದ ಟಿನ್ ರೂಫ್‌: 5 ಮಂದಿ ಗಂಭೀರ

ಫುಟ್ಬಾಲ್ ಮೈದಾನದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್​ ಬಿದ್ದಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಥಾಣೆ: ಫುಟ್ಬಾಲ್ ಮೈದಾನದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್​ ಬಿದ್ದಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪ್ರಕರಣದಲ್ಲಿ ಒಂಬತ್ತು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಐವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Ad
300x250 2

ಭಾರೀ ಗಾಳಿ ಮಳೆಯಿಂದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್ ತುಂಡಾಗಿ ಮೈದಾನದಲ್ಲಿ ಆಡವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡಿರುವ ಮಕ್ಕಳನ್ನು ಸಮೀಪದ ಬೆಥನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Ad
Ad
Nk Channel Final 21 09 2023
Ad