ನವದೆಹಲಿ : ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಇಂದು ಸ್ಥಗಿತಗೊಳಿಸಲಾಗುವುದು. ಕೋಲ್ಕತಾದ ಆರ್ಜಿಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯರ ಹತ್ಯೆಯನ್ನು ವಿರೋಧಿಸಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಸೋಮವಾರ ದೇಶಾದ್ಯಂತ ಕೆಲವು ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಈ ಬೆಳವಣಿಗೆ ದೇಶಾದ್ಯಂತ ನಾನ್ ಎಮರ್ಜೆನ್ಸಿ ಸೇವೆಗಳು ಬಂದ್ ಆಗಲಿವೆ.
ಸಂಘದ ಸದಸ್ಯರು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಈ ಘಟನೆಯ ಬಗ್ಗೆ ತಕ್ಷಣ ಸಿಬಿಐ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಸಂಜಯ್ ರೈ, ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗವಾದ ವಿಪತ್ತು ಪ್ರತಿಕ್ರಿಯೆ ಪಡೆ ಘಟಕದಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದ.
ಇನ್ನು ಬೆಂಗಳೂರಿನಲ್ಲೂ ಡಾಕ್ಟರ್ಸ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದ್ಯಾರ್ಥಿ ಹತ್ಯೆ ಮತ್ತು ಸ್ಟೇಫಂಡ್ ಹೆಚ್ಚಳಕ್ಕೆ ಆಗ್ರಹಿಸಿ ವೈದ್ಯರು ರಸ್ತೆಗೆ ಇಳಿಯಲಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್ ಸೇರಿ ಎಲ್ಲಾ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳಲ್ಲಿ ಇವತ್ತು ಕೆಲಸಕ್ಕೆ ಸರ್ಕಾರಿ ರೆಸಿಡೆಂಟ್ ಡಾಕ್ಟರ್ಸ್ ಗೈರಾಗುವ ಸಾಧ್ಯತೆ ಇದೆ. ಒಟ್ಟಾರೆ ಇವತ್ತು ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ತುರ್ತು ಸೇವೆ ಹೊರತು ಹಲವು ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

