ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ 3ನೇ ಮತ್ತು ಅಂತಿಮ ಹಂತದ ಮತದಾನ ಈಗ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ವೋಟಿಂಗ್ ನಡೆಯಲಿದೆ. 39.18 ಲಕ್ಷ ಮತದಾರರು 415 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಮೂರನೇ ಹಂತದಲ್ಲಿ 39,18,220 ಮತದಾರರು ಮತದಾನ ಮಾಡಲು ಅರ್ಹತೆ ಪಡೆದುಕೊಂಡಿದ್ದು, ಇವತ್ತು ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ 20,09,033 ಪುರುಷ ಮತದಾರರು, 19,09,130 ಮಹಿಳಾ ಮತದಾರರು ಮತ್ತು 57 ತೃತೀಯಲಿಂಗಿ ಮತದಾರಿದ್ದಾರೆ.
ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು, ಎರಡನೇ ಹಂತದ ಮತದಾನ ಸೆಪ್ಟೆಂಬರ್ 25 ರಂದು ನಡೆದಿತ್ತು. ಇಂದು ಮಂಗಳವಾರ 40 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೂರನೇ ಹಂತದ ಚುನಾವಣೆಗೆ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಶಾಂತಿಯುತ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರ್ಟಿಕಲ್ 370 ರದ್ದತಿ ನಂತ್ರ ನಡೆಯುತ್ತಿರುವ ಮೊದಲ ಎಲೆಕ್ಷನ್ ಇದಾಗಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ.
Ad