ನವದೆಹಲಿ: ಎಸ್ಸಿ, ಎಸ್ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ರಿಸರ್ವೇಷನ್ ಬಚಾವೋ ಸಂಘರ್ಷ್ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಬುಧವಾರ ನಡೆಯಲಿದೆ.
ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿದೆ. ಉದ್ಯಮಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ನೀಡಬೇಕು ಎಂದು ಆದಿವಾಸಿ, ದಲಿತ ಸಂಘಟನೆಗಳು ಕರೆ ನೀಡಿವೆ.ಯಾವ ಸೇವೆಗಳು ತೆರೆದಿರುತ್ತದೆ?:
ತುರ್ತು ಸೇವೆಗಳು: ಆ್ಯಂಬುಲೆನ್ಸ್ ಸೇವೆಗಳು, ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು ಕಾರ್ಯನಿರ್ವಹಿಸುತ್ತವೆ.
ಪೊಲೀಸ್ ಸೇವೆಗಳು: ಪೊಲೀಸ್ ಸೇವೆಗಳ ಕಾರ್ಯಾಚರಣೆ ಎಂದಿನಂತೆ ಮುಂದುವರಿಯುತ್ತದೆ.
ಔಷಧಾಲಯಗಳು: ಅಗತ್ಯ ವೈದ್ಯಕೀಯ ಸೇವೆಗಳು ಮತ್ತು ಔಷಧಿ ಅಂಗಡಿಗಳು ತೆರೆದಿರುತ್ತವೆ
ಬ್ಯಾಂಕ್ಗಳು, ಶಾಲೆಗಳು ಮತ್ತು ಕಾಲೇಜುಗಳು: ಎಲ್ಲಾ ವಾಣಿಜ್ಯ ಬ್ಯಾಂಕ್ಗಳು, ಶಾಲೆಗಳು ಬಂದ್ನ ಹೊರತಾಗಿಯೂ ಸಾಮಾನ್ಯವಾಗಿ ಕಾರ್ಯ ನಿರ್ವಹಿಸುವ ನಿರೀಕ್ಷೆಯಿದೆ.

