ನವದೆಹಲಿ: ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣ ಆಯೋಗದ ತಂಡ ಎರಡು ದಿನಗಳ ಭೇಟಿಗಾಗಿ ಸೋಮವಾರ(ಆಗಸ್ಟ್ 12) ಹರ್ಯಾಣಕ್ಕೆ ಆಗಮಿಸಿದ್ದು, ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಯ ಚುನಾವಣ ಸಿದ್ಧತೆಯನ್ನು ಪರಿಶೀಲನೆ ನಡೆಸಲಿದೆ.

ಹರಿಯಾಣ ವಿಧಾನಸಭೆಗೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ.ಚುನಾವಣ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಕೂಡ ತಂಡದ ಭಾಗವಾಗಿದ್ದಾರೆ

ಹರಿಯಾಣ ಮುಖ್ಯ ಚುನಾವಣಾಧಿಕಾರಿ ಪಂಕಜ್ ಅಗರ್ವಾಲ್ ಅವರು ಆಗಮಿಸಿದ ತಂಡವನ್ನು ಸ್ವಾಗತಿಸಿದರು. ತಂಡವು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲಿದೆ.

ಮಂಗಳವಾರ (ಆಗಸ್ಟ್ 13), ಚುನಾವಣ ಸಮಿತಿಯ ತಂಡವು ರಾಜ್ಯಾದ್ಯಂತ ಮೇಲ್ವಿಚಾರಣೆ ಮತ್ತು ಜಾಗರೂಕತೆಯನ್ನು ಹೆಚ್ಚಿಸಲು ಜಾರಿ ಸಂಸ್ಥೆಗಳಿಗೆ ಮಾರ್ಗಸೂಚಿಗಳನ್ನು ನೀಡುತ್ತದೆ. ಆಯೋಗವು ಇತರ ವ್ಯವಸ್ಥೆಗಳನ್ನು ಪರಿಶೀಲಿಸಲು ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಇತರ ಆಡಳಿತ ಕಾರ್ಯದರ್ಶಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುತ್ತದೆ.