Bengaluru 26°C
Ad

ರೈಲು ಅವಘಡ : ಸಂತಾಪ ಸೂಚಿಸಿ ಮೋದಿ ಸರ್ಕಾರವನ್ನು ಟೀಕಿಸಿದ ಖರ್ಗೆ

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ರೈಲು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 15 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ಅವಘಡದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ ಸಂತಾಪ ಸೂಚಿಸಿದರು.

ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ರೈಲು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 15 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ಅವಘಡದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ ಸಂತಾಪ ಸೂಚಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು, ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಕಾಂಚನ್‌ ಜುಂಗಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಹಲವಾರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದರು.

ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ. ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಇದೇ ವೇಳೆ ಖರ್ಗೆ ಒತ್ತಾಯಿಸಿದರು. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದ ರೈಲ್ವೆ ಸಚಿವಾಲಯವು ಸಂಪೂರ್ಣ ದುರಾಡಳಿತದಲ್ಲಿ ತೊಡಗಿದೆ ಎಂದು ಖರ್ಗೆ ಗಂಭೀರ ಆರೋಪ ಮಾಡಿದರು.

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ.

Ad
Ad
Nk Channel Final 21 09 2023
Ad