ಹುಬ್ಬಳ್ಳಿ : ಕರ್ನಾಟಕ ರಾಜ್ಯದಲ್ಲಿಂದ ನೆರೆಯ ಗೋವಾ ರಾಜ್ಯಕ್ಕೆ ರೈಲು ಸಂಚಾರ ಕಲ್ಪಿಸುವ ಮಾರ್ಗದಲ್ಲಿ ಗೂಡ್ಸ್ ರೈಲು ದೂಧ್ ಸಾಗರ ಬಳಿ ಹಳಿ ತಪ್ಪಿದೆ. ರೈಲು ಹಳಿಯಿಂದ ಗೂಡ್ಸ್ ರೈಲು ತೆರವು ಕಾರ್ಯಾಚರಣೆ ಕಾರ್ಯ ಮುಂದುವರೆದಿದ್ದು, ಇಂದು ಕೂಡ ಕರ್ನಾಟಕ – ಗೋವಾ ರೈಲು ಸಂಚಾರ ಇರುವುದಿಲ್ಲ ಎಂದು ನೈರುತ್ಯ ಇಲಾಖೆ ತಿಳಿಸಿದೆ.
ಧೂದ್ ಸಾಗರ್ ಬಳಿ ರೈಲು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ದಿನಗಳಿಂದ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕರ್ನಾಟಕ ಮತ್ತು ಗೋವಾ ನಡುವಿನ ಎಲ್ಲ ರೈಲುಗಳ ಸಂಚಾರ ಬಂದ್ ಆಗಿತ್ತು. ಇಂದು ಶಾಲಿಮಾರ್ – ವಾಸ್ಕೋ ಡ ಗಾಮಾ ರೈಲು ಹುಬ್ಬಳ್ಳಿಯಲ್ಲಿ ನಿಲುಗಡೆಯಾಗಿದ್ದು, ಹುಬ್ಬಳ್ಳಿಯಿಂದ ರೈಲು ಪ್ರಯಾಣಿಕರಿಗೆ ಪರ್ಯಾಯವಾಗಿ ಬಸ್ಸಿನಲ್ಲಿ ಹೋಗುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 1,200 ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

